ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.