ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.