ಮುಖಪುಟ
ನಮ್ಮನ್ನು ಸಂಪರ್ಕಿಸಿ
ಕನ್ನಡ
KJV
தமிழ்
తెలుగు
हिन्दी
೨ ಪೂರ್ವಕಾಲವೃತ್ತಾಂತ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
೧ ಸಮುವೇಲನು
೨ ಸಮುವೇಲನು
೧ ಅರಸುಗಳು
೨ ಅರಸುಗಳು
೧ ಪೂರ್ವಕಾಲವೃತ್ತಾಂತ
೨ ಪೂರ್ವಕಾಲವೃತ್ತಾಂತ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗಳು
ರೋಮಾಪುರದವರಿಗೆ
೧ ಕೊರಿಂಥದವರಿಗೆ
೨ ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
೧ ಥೆಸಲೊನೀಕದವರಿಗೆ
೨ ಥೆಸಲೊನೀಕದವರಿಗೆ
೧ ತಿಮೊಥೆಯನಿಗೆ
೨ ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
೧ ಪೇತ್ರನು
೨ ಪೇತ್ರನು
೧ ಯೋಹಾನನು
೨ ಯೋಹಾನನು
೩ ಯೋಹಾನನು
ಯೂದನು
ಪ್ರಕಟನೆ
13
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
1
ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
2
ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
3
ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
4
ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
5
ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
6
ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.
7
ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
8
ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
9
ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
10
ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
11
ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
12
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
13
ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.
14
ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
15
ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
16
ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
17
ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
18
ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
19
ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
20
ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
21
ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.
22
ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
‹
›