ಮುಖಪುಟ
ನಮ್ಮನ್ನು ಸಂಪರ್ಕಿಸಿ
ಕನ್ನಡ
KJV
தமிழ்
తెలుగు
हिन्दी
ಯೆಹೆಜ್ಕೇಲನು
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
೧ ಸಮುವೇಲನು
೨ ಸಮುವೇಲನು
೧ ಅರಸುಗಳು
೨ ಅರಸುಗಳು
೧ ಪೂರ್ವಕಾಲವೃತ್ತಾಂತ
೨ ಪೂರ್ವಕಾಲವೃತ್ತಾಂತ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗಳು
ರೋಮಾಪುರದವರಿಗೆ
೧ ಕೊರಿಂಥದವರಿಗೆ
೨ ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
೧ ಥೆಸಲೊನೀಕದವರಿಗೆ
೨ ಥೆಸಲೊನೀಕದವರಿಗೆ
೧ ತಿಮೊಥೆಯನಿಗೆ
೨ ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
೧ ಪೇತ್ರನು
೨ ಪೇತ್ರನು
೧ ಯೋಹಾನನು
೨ ಯೋಹಾನನು
೩ ಯೋಹಾನನು
ಯೂದನು
ಪ್ರಕಟನೆ
2
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
1
ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
2
ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
3
ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
4
ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
5
ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
6
ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
7
ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
8
ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
9
ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.
10
ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
‹
›