ಮುಖಪುಟ
ನಮ್ಮನ್ನು ಸಂಪರ್ಕಿಸಿ
ಕನ್ನಡ
KJV
தமிழ்
తెలుగు
हिन्दी
ಆದಿಕಾಂಡ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
೧ ಸಮುವೇಲನು
೨ ಸಮುವೇಲನು
೧ ಅರಸುಗಳು
೨ ಅರಸುಗಳು
೧ ಪೂರ್ವಕಾಲವೃತ್ತಾಂತ
೨ ಪೂರ್ವಕಾಲವೃತ್ತಾಂತ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗಳು
ರೋಮಾಪುರದವರಿಗೆ
೧ ಕೊರಿಂಥದವರಿಗೆ
೨ ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
೧ ಥೆಸಲೊನೀಕದವರಿಗೆ
೨ ಥೆಸಲೊನೀಕದವರಿಗೆ
೧ ತಿಮೊಥೆಯನಿಗೆ
೨ ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
೧ ಪೇತ್ರನು
೨ ಪೇತ್ರನು
೧ ಯೋಹಾನನು
೨ ಯೋಹಾನನು
೩ ಯೋಹಾನನು
ಯೂದನು
ಪ್ರಕಟನೆ
39
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
1
ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
2
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
3
ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
4
ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
5
ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
6
ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
7
ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
8
ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
9
ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
10
ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
11
ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
12
ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
13
ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
14
ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
15
ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.
16
ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
17
ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು;
18
ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು.
19
ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.
20
ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
21
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
22
ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.
23
ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
‹
›