ಮುಖಪುಟ
ನಮ್ಮನ್ನು ಸಂಪರ್ಕಿಸಿ
ಕನ್ನಡ
KJV
தமிழ்
తెలుగు
हिन्दी
ಯೋಹಾನನು
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
೧ ಸಮುವೇಲನು
೨ ಸಮುವೇಲನು
೧ ಅರಸುಗಳು
೨ ಅರಸುಗಳು
೧ ಪೂರ್ವಕಾಲವೃತ್ತಾಂತ
೨ ಪೂರ್ವಕಾಲವೃತ್ತಾಂತ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗಳು
ರೋಮಾಪುರದವರಿಗೆ
೧ ಕೊರಿಂಥದವರಿಗೆ
೨ ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
೧ ಥೆಸಲೊನೀಕದವರಿಗೆ
೨ ಥೆಸಲೊನೀಕದವರಿಗೆ
೧ ತಿಮೊಥೆಯನಿಗೆ
೨ ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
೧ ಪೇತ್ರನು
೨ ಪೇತ್ರನು
೧ ಯೋಹಾನನು
೨ ಯೋಹಾನನು
೩ ಯೋಹಾನನು
ಯೂದನು
ಪ್ರಕಟನೆ
9
1
2
3
4
5
6
7
8
9
10
11
12
13
14
15
16
17
18
19
20
21
1
ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2
ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
3
ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
4
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
5
ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
6
ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
7
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8
ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
9
ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು.
10
ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
11
ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
12
ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
13
ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
14
ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.
15
ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
16
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
17
ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
18
ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
19
ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
20
ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.
21
ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
22
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
23
ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
24
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
25
ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
26
ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
27
ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
28
ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
29
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
30
ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
31
ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
32
ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
33
ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
34
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35
ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
36
ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
37
ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
38
ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
39
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
40
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.
41
ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
‹
›