ಮುಖಪುಟ
ನಮ್ಮನ್ನು ಸಂಪರ್ಕಿಸಿ
ಕನ್ನಡ
KJV
தமிழ்
తెలుగు
हिन्दी
ಙ್ಞಾನೋಕ್ತಿಗಳು
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
೧ ಸಮುವೇಲನು
೨ ಸಮುವೇಲನು
೧ ಅರಸುಗಳು
೨ ಅರಸುಗಳು
೧ ಪೂರ್ವಕಾಲವೃತ್ತಾಂತ
೨ ಪೂರ್ವಕಾಲವೃತ್ತಾಂತ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗಳು
ರೋಮಾಪುರದವರಿಗೆ
೧ ಕೊರಿಂಥದವರಿಗೆ
೨ ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
೧ ಥೆಸಲೊನೀಕದವರಿಗೆ
೨ ಥೆಸಲೊನೀಕದವರಿಗೆ
೧ ತಿಮೊಥೆಯನಿಗೆ
೨ ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
೧ ಪೇತ್ರನು
೨ ಪೇತ್ರನು
೧ ಯೋಹಾನನು
೨ ಯೋಹಾನನು
೩ ಯೋಹಾನನು
ಯೂದನು
ಪ್ರಕಟನೆ
11
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
1
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
2
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
3
ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
4
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
5
ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
6
ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
7
ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.
8
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
9
ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
10
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
11
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
12
ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
13
ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.
14
ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
15
ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
16
ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
17
ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
18
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
19
ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
20
ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
21
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
22
ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.
23
ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.
24
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
25
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
26
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
27
ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು.
28
ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
29
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
30
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.
31
ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
‹
›