ಮುಖಪುಟ
ನಮ್ಮನ್ನು ಸಂಪರ್ಕಿಸಿ
ಕನ್ನಡ
KJV
தமிழ்
తెలుగు
हिन्दी
ರೋಮಾಪುರದವರಿಗೆ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
೧ ಸಮುವೇಲನು
೨ ಸಮುವೇಲನು
೧ ಅರಸುಗಳು
೨ ಅರಸುಗಳು
೧ ಪೂರ್ವಕಾಲವೃತ್ತಾಂತ
೨ ಪೂರ್ವಕಾಲವೃತ್ತಾಂತ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗಳು
ರೋಮಾಪುರದವರಿಗೆ
೧ ಕೊರಿಂಥದವರಿಗೆ
೨ ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
೧ ಥೆಸಲೊನೀಕದವರಿಗೆ
೨ ಥೆಸಲೊನೀಕದವರಿಗೆ
೧ ತಿಮೊಥೆಯನಿಗೆ
೨ ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
೧ ಪೇತ್ರನು
೨ ಪೇತ್ರನು
೧ ಯೋಹಾನನು
೨ ಯೋಹಾನನು
೩ ಯೋಹಾನನು
ಯೂದನು
ಪ್ರಕಟನೆ
1
1
2
3
4
5
6
7
8
9
10
11
12
13
14
15
16
1
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
2
(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
3
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
4
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
5
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
6
ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
7
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
8
ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
9
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
10
ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
11
ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
12
ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
13
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
14
ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
15
ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
16
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
17
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
18
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
19
ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
20
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
21
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
22
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
23
ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
24
ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
25
ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
26
ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
27
ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
28
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
29
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
30
ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
31
ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
32
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
›